ಕಡಬ ತಾಲ್ಲೂಕು ರೆಂಜಿಲಾಡಿ ಗ್ರಾಮದ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿದಿಯಲ್ಲಿ ಸ್ವಸ್ತಿ |ಶ್ರೀ ಶುಭಕೃತ್ ನಾಮ ಸಂವತ್ಸರದ ಮೀನ ಮಾಸ ಸುಗ್ಗಿ ಹುಣ್ಣಿಮೆ 22 ದಿನಾಂಕ 05 -04 -2023 ನೇ ಬುಧವಾರದಿಂದ 08 -04 -2023 ನೇ ಶನಿವಾರದ ವರೆಗೆ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳು ಹಾಗೂ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸುಬ್ರಹ್ಮಣ್ಯ ಮಠ ಇವರ ಆಶೀರ್ವಾದದೊಂದಿಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಾರ್ಷಿಕ ಜಾತ್ರೆಯು ನಡೆಯಲಿರುವುದೆಂದು ಆಡಳಿತ ಸಮಿತಿ ತಿಳಿಸಿದೆ




